New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ಚರ್ಚಾ ಸ್ಪರ್ಧೆಯಲ್ಲಿ ಹೆಚ್ ಕೆ ಎಸ್ ವಿದ್ಯಾರ್ಥಿಯ ಅದ್ಬುತ ಸಾಧನೆ.

ಚರ್ಚಾ ಸ್ಪರ್ಧೆಯಲ್ಲಿ ಹೆಚ್ ಕೆ ಎಸ್ ವಿದ್ಯಾರ್ಥಿಯ ಅದ್ಬುತ ಸಾಧನೆ.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜು ಹಾಸನ. ದಿನಾಂಕ:29.08.2025ನೇ ಶುಕ್ರವಾರದಂದು ಸಹಕಾರ ಚಳುವಳಿಯ ಸಾಧನೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಮತ್ತು ಚಳುವಳಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಸನ ಜಿಲ್ಲಾ ಸಹಕಾರ ಯೂನಿಯನ್ (ನಿ), ಹಾಸನ ಇವರ ವತಿಯಿಂದ ಹಾಸನ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರ ಅಂಗವಾಗಿ ನಡೆದ ಚರ್ಚಾ ಸ್ಪರ್ಧೆಯಲ್ಲಿ
ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಯ ಅಕ್ಷರ ಎಲ್ ಪ್ರಥಮ ಬಹುಮಾನವನ್ನು ಪಡೆದು ಅದ್ಭುತ ಸಾಧನೆಗೈದಿದ್ದಾರೆ.

ವಿಜೇತರನ್ನು ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ. ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಎಲ್ಲಾ
ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Share