New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

NDA ಮತ್ತು NA-2 ಪರೀಕ್ಷಾ ಫಲಿತಾಂಶ ಪ್ರಕಟ : ಹೆಚ್ ಕೆ ಎಸ್ ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

NDA ಮತ್ತು NA-2 ಪರೀಕ್ಷಾ ಫಲಿತಾಂಶ ಪ್ರಕಟ : ಹೆಚ್ ಕೆ ಎಸ್ ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಎಸ್.ಎಸ್.ಬಿ. ( ಸರ್ವಿಸ್ ಸೆಲೆಕ್ಷನ್ ಬೋರ್ಡ್ ) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದು ಅದ್ಭುತ ಸಾಧನೆ ಗೈದಿದ್ದಾರೆ.

ವಿದ್ಯಾರ್ಥಿಗಳಾದ ಆರ್ಯ. ವಿ, ಸೃಜನಾ. ಎಸ್, ಯಜತ್ ಗೌಡ ಎಸ್.ಪಿ, ವಿಶ್ವೇಶ್ ಎನ್.ಎಚ್, ತಮ್ಮ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಸಾಧನೆಗೈದಿದ್ದು ಅಖಿಲ ಭಾರತ ಮಟ್ಟದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ತೇರ್ಗಡೆಗೊಂಡ 7,650 ವಿದ್ಯಾರ್ಥಿಗಳಲ್ಲಿ 4 ಜನ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ತೇರ್ಗಡೆಗೊಂಡ 500 ವಿದ್ಯಾರ್ಥಿನಿಯರಲ್ಲಿ ಒಬ್ಬರು ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿ ಎಂಬುದು ಶ್ಲಾಘನೀಯ ವಿಚಾರ.

ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್ ಕೆ ಸುರೇಶ್, ಕಾರ್ಯದರ್ಶಿಗಳಾದ ಶ್ರೀ ಹೆಚ್ ಎಸ್ ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕರಾದ ರಕ್ಷಿತ್ ಬಿ.ಎಸ್ ಹಾಗೂ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿಗಳು ಶ್ಲಾಘಿಸಿ ಅಭಿನಂದಿಸಿದ್ದಾರೆ.

Share